Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಡಾ. ಕೆ. ವಿದ್ಯಾಕುಮಾರಿ..!!

Dhrishya News by Dhrishya News
12/10/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಉಡುಪಿ: ಅಕ್ಟೋಬರ್: 12: ದೃಶ್ಯ ನ್ಯೂಸ್ : ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವೈಭವದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಸೂಚನೆ ನೀಡಿದರು.

ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿದ ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಬಳಿಕ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು.

ಕಾರ್ಯಕ್ರಮಕ್ಕೆ ಜನಪ್ರನಿಧಿಗಳು, ಗಣ್ಯರು ಸೇರಿದಂತೆ ಶಿಷ್ಠಾಚಾರದಂತೆ ಎಲ್ಲರನ್ನೂ ಆಹ್ವಾನಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಅಂದು ಬೆಳಗ್ಗೆ 8 ಗಂಟೆಗೆ ಬೋರ್ಡ್ ಹೈಸ್ಕೂಲ್‌ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳನ್ನು ಸಾರುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದರು.

ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ನಗರಸಭೆ ಪೌರಾಯುಕ್ತ ರಾಯಪ್ಪ, ಡಿ.ಡಿ.ಪಿ.ಐ ಗಣಪತಿ ಕೆ ಹಾಗೂ ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Previous Post

ಕುಂದಾಪುರ:ಅಕ್ಟೋಬರ್.17ರಂದು ಬೃಹತ್ ರಕ್ತದಾನ ಶಿಬಿರ..!!

Next Post

ಬ್ರಹ್ಮಗಿರಿ : ದಿವ್ಯಾಂಗರ ಕೌಶಲ್ಯಾಭಿವೃದ್ಧಿ ತರಬೇತಿ – ಉದ್ಯೋಗ ಶಿಬಿರ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಗಿರಿ : ದಿವ್ಯಾಂಗರ ಕೌಶಲ್ಯಾಭಿವೃದ್ಧಿ ತರಬೇತಿ – ಉದ್ಯೋಗ ಶಿಬಿರ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News