Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಡುಹಂದಿ ಬೇಟೆಗೆ ಕಚ್ಚಾ ಬಾಂಬ್‌ಗಳನ್ನಿಟ್ಟ ಇಬ್ಬರು ಖತರ್ನಾಕ್ ಆರೋಪಿಗಳ ಬಂಧನ :ಬ್ರಹ್ಮಾವರ ಪೊಲೀಸರ ಕಾರ್ಯಾಚರಣೆ..!!

Dhrishya News by Dhrishya News
15/10/2023
in ಕರಾವಳಿ, ಸುದ್ದಿಗಳು
0
0
SHARES
46
VIEWS
Share on FacebookShare on Twitter

ಬ್ರಹ್ಮಾವರ : ಅಕ್ಟೋಬರ್: 15: ದೃಶ್ಯ ನ್ಯೂಸ್ : ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗುಂಜೆ ಗ್ರಾಮದ ಮಂದಾರ್ತಿ ಬಳಿ ವ್ಯಕ್ತಿಯೊಬ್ಬರ ಹಾಡಿಯಲ್ಲಿ ಆರೋಪಿಗಳು ಕಾಡುಹಂದಿ ಬೇಟೆಗಾಗಿ ಕಚ್ಚಾ ಬಾಂಬ್‌ಗಳನ್ನು ತಯಾರಿಸಿ ಹಾಡಿಯಲ್ಲಿ ಇಟ್ಟ ಪರಿಣಾಮ ಸುಧೀರ್ ಪೂಜಾರಿ ಎನ್ನುವರ ಸಾಕು ನಾಯಿ ಕಚ್ಚಾ ಬಾಂಬ್‌ನ್ನು ಕಚ್ಚಿ ಮೃತಪಟ್ಟ ಘಟನೆ ಅ.12ರಂದು ವರದಿಯಾಗಿದೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಅಕ್ರಮ ಸ್ಫೋಟಕ ಕಾಯ್ದೆಯಂತೆ ಪ್ರಕರಣವೊಂದು ದಾಖಲಾಗಿತ್ತು.

ಪ್ರಕರಣ ಗಂಭೀರವಾಗಿ ಪರಿಗಣಿಸಿದ ಬ್ರಹ್ಮಾವರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ದಾವಣಗೆರೆ ಚೆನ್ನಗಿರಿ ಮೂಲದ ಕಾಶಿನಾಥ ಜೆ.ಎಸ್ (30), ಶಿವಮೊಗ್ಗ ಜಿಲ್ಲೆಯ ಸದಾಶಿವಪುರದ ಹಕ್ಕಿಪಿಕ್ಕಿ ಕ್ಯಾಂಪ್ ನಿವಾಸಿ ಯಹೋಶಿವು (25) ಬಂಧಿತ ಆರೋಪಿಗಳು.

ಆರೋಪಿಗಳಿಂದ ಕಚ್ಚಾ ಬಾಂಬ್ ಸಾಗಾಟಕ್ಕೆ ಬಳಸಿದ 15 ಸಾವಿರ ಮೌಲ್ಯದ ದ್ವಿಚಕ್ರ ವಾಹನ ಹಾಗೂ ಎರಡು ಮೊಬೈಲ್‌ ಮತ್ತು 10 ಸಾವಿರ ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಉಡುಪಿ ಪೊಲೀಸ್‌ ಉಪಾಧೀಕ್ಷಕ ದಿನಕರ ಪಿ.ಕೆ ನಿರ್ದೇಶನದಲ್ಲಿ ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ ಪಿ.ಎಮ್ ನೇತೃತ್ವದಲ್ಲಿ ಬ್ರಹ್ಮಾವರ ಪಿಎಸ್‌ಐ ರಾಜಶೇಖರ ವಂದಲಿ, ಠಾಣೆ ಸಿಬ್ಬಂದಿಗಳಾದ ಸುರೇಶ್ ಶೆಟ್ಟಿ, ಸಂತೋಷ ಶೆಟ್ಟಿ, ಪ್ರವೀಣ್‌ ಶೆಟ್ಟಿಗಾರ್, ವೆಂಕಟರಮಣ ದೇವಾಡಿಗ, ಮಹಮ್ಮದ್ ಅಜ್ಮಲ್, ಸಂತೋಷ ರಾಠೋಡ್ ಮತ್ತು ದೀಲಿಪ್‌ರವರನ್ನನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದ್ದರು. ಘಟನಾ ಸ್ಥಳದಲ್ಲಿ ಉಡುಪಿ ಬಿ.ಡಿ.ಡಿ.ಎಸ್ ತಂಡ, ಸೀನ್ ಆಫ್ ಕ್ರೈಮ್ ಅಧಿಕಾರಿ ತಂಡ, ಮತ್ತು ಬ್ರಹ್ಮಾವರ ಪೊಲೀಸರು ಒಟ್ಟು 22 ಸಜೀವ ಕಚ್ಚಾ ಬಾಂಬ್‌ಗಳನ್ನು ಪತ್ತೆ ಮಾಡಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಹಾಗೂ ನ್ಯಾಯಾಲಯದ ಅನುಮತಿ ಮೇರೆಗೆ ಸಾರ್ವಜನಿಕರ ಸುರಕ್ಷತ ಹಾಗೂ ಭದ್ರತೆಯ ಹಿತದೃಷ್ಠಿಯಿಂದ ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಿದ್ದರು.

ಹಂದಿ ಬೇಟೆಯಾಡುವ ಖತರ್ನಾಕ್ ಆರೋಪಿಗಳು..!

ಬಂಧಿತ ಇಬ್ಬರು ಆರೋಪಿಗಳು ಶಿವಮೊಗ್ಗ ಜಿಲ್ಲೆಯ ಸೊರಬ ಹಾಗೂ ಇನ್ನಿತರ ಕಡೆ ಸ್ಥಳೀಯವಾಗಿ ಸಿಗುವ ಸ್ಫೋಟಕ ರಾಸಾಯನಿಕ ವಸ್ತುಗಳನ್ನು ಬಳಸಿ ಕಚ್ಚಾ ಬಾಂಬ್‌ಗಳನ್ನು ತಯಾರಿಸಿ ಶಿವಮೊಗ್ಗ, ಉಡುಪಿ ಮತ್ತು ದಾವಣಗೆರೆ ಭಾಗಗಳಲ್ಲಿ ಕಾಡು ಹಂದಿಗಳ ಬೇಟೆಗೆ(ಶಿಕಾರಿಗೆ) ಬಳಕೆ ಮಾಡಿ ಕಾಡು ಹಂದಿಯ ಮಾಂಸವನ್ನು ಮಾರಾಟ ಮಾಡುತ್ತಿದ್ದಾರೆಂದು ತಿಳಿದುಬಂದಿದ್ದು ಈ ಹಿಂದೆ ಬ್ರಹ್ಮಾವರ ಮತ್ತು ಕೋಟ ಭಾಗದಲ್ಲಿ ಕಚ್ಚಾ ಬಾಂಬ್ ಬಳಸಿ ಕಾಡುಹಂದಿ ಶಿಕಾರಿ ಮಾಡಿರುವ ಸಂಶಯವಿರುವ ಕಾರಣ ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

Previous Post

ಮೈಸೂರು :ನಾಡ ಹಬ್ಬ ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಂದ ಚಾಲನೆ..!!

Next Post

ಉಚ್ಚಿಲ ಮಹಾಲಕ್ಷ್ಮಿಗೆ ಬೇಸಿಗೆ ನಾಡ ದೋಣಿ ಮಲ್ಪೆ ವತಿಯಿಂದ ಚಿನ್ನದ ಬೂತೈ ಮೀನಿನ ಸರ ಸಮರ್ಪಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಚ್ಚಿಲ ಮಹಾಲಕ್ಷ್ಮಿಗೆ ಬೇಸಿಗೆ ನಾಡ ದೋಣಿ ಮಲ್ಪೆ ವತಿಯಿಂದ ಚಿನ್ನದ ಬೂತೈ ಮೀನಿನ ಸರ ಸಮರ್ಪಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026
ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

09/10/2026
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

09/10/2026
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026

Recent News

imunify-bot-check